ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಇನ್ನಿಲ್ಲ
=================
ನಾಡಿನ ಹಿರಿಯ ವಿದ್ವಾಂಸರು ಹಾಗೂ ಪದ್ಮಶ್ರೀ ಪುರಸ್ಕೃತರಾದ ಡಾ.ಬನ್ನಂಜೆ ಗೋವಿಂದಾಚಾರ್ಯ (84) ಭಾನುವಾರ ಬೆಳಿಗ್ಗೆ 11.15ಕ್ಕೆ ಅಂಬಲಪಾಡಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.
================
2009ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷತೆ, ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ದೊರೆತಿದೆ. 1979ರಲ್ಲಿ ಅಮೆರಿಕಾದಲ್ಲಿ ನಡೆದ ವಿಶ್ವಶಾಂತಿ ಸಮ್ಮೇಳನಕ್ಕೆ ವಿಶೇಷ ಆಹ್ವಾನಿತರಾಗಿ ಬನ್ನಂಜೆ ಗೋವಿಂದಾಚಾರ್ಯರು ಭಾಗವಹಿಸಿದ್ದರು.
===============
👉 ವಿದ್ಯಾವಾಚಸ್ಪತಿ, ಪದ್ಮಶ್ರೀ ಪುರಸ್ಕೃತ, ಡಾ.ಬನ್ನಂಜೆ ಗೋವಿಂದಾಚಾರ್ಯ ಪರಿಚಯ:
==================
> ಹೆಸರು: ಡಾ ಬನ್ನಂಜೆ ಗೋವಿಂದಾಚಾರ್ಯ
> ತಂದೆ: ದಿವಂಗತ ಪಡುಮನ್ನೂರು ನಾರಾಯಣ ಆಚಾರ್ಯ
> ಊರು: ಉಡುಪಿ ತಾಲೂಕು
> ಸಾಧನೆಯ ಕ್ಷೇತ್ರ : ಪತ್ರಕರ್ತ - ಸಾಹಿತ್ಯ -ಸಂಶೋಧಕ - ಕವಿ - ಅನುವಾದಕ - ಉಪನ್ಯಾಸಕ - ಪ್ರವಚನ ವಿದ್ವಾಂಸ
> ಉದ್ಯೋಗ : ಪ್ರತಿಷ್ಠಿತ ಉದಯವಾಣಿ ದಿನಪತ್ರಿಕೆಯಲ್ಲಿ ಪತ್ರಕರ್ತ, ಸಾಪ್ತಾಹಿಕ ವಿಭಾಗ ಸಂಪಾದಕರಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ .
> ಸಾಹಿತ್ಯಿಕ ಸಾಧನೆಗಳು : ಈ ತನಕ ಸಂಸ್ಕೃತದಲ್ಲಿ ಸುಮಾರು ಕೃತಿಗಳು ಕನ್ನಡದಲ್ಲಿ ಸುಮಾರು 120 ಕೃತಿಗಳ (ಸಂಸ್ಕೃತದಿಂದ ಕನ್ನಡಕ್ಕೆ ಅನುವಾದ ಸುಮಾರು 50 ಕೃತಿ ಸೇರಿ) ರಚನೆ ಮತ್ತು ಪ್ರಕಾಶನ. ಭಾರತದ ಪ್ರಾಚೀನ ಜ್ಞಾನ ಶಾಖೆಗಳಾದ ವೇದ - ಉಪನಿಷತ್ತು - ಪುರಾಣ- ರಾಮಾಯಣ - ಮಹಾಭಾರತ ಇತ್ಯಾದಿಗಳ ಕುರಿತು ದೇಶ ವಿದೇಶಗಳಲ್ಲಿ ಈ ತನಕ ಸುಮಾರು 26,000 ಗಂಟೆಗೂ ಹೆಚ್ಚು ಕಾಲ ಉಪನ್ಯಾಸ ಪ್ರವಚನಗೈದ ದಾಖಲೆ .
=========
👉 ಸಾಧನೆಗೆ ಸಂದ ಪ್ರಶಸ್ತಿ ಪುರಸ್ಕಾರಗಳು :
===========
> ರಾಜ್ಯ ಮಟ್ಟದ ಪ್ರಶಸ್ತಿಗಳು :
ಉಡುಪಿ ಶ್ರೀ ಕೃಷ್ಣ ಮಠ ಅಷ್ಟಮಠಗಳು ಸೇರಿದಂತೆ ಅನೇಕ ಪ್ರಸಿದ್ಧ ಮಠ ಸಂಸ್ಥಾನಗಳಿಂದ ವಿದ್ಯಾ ವಾಚಸ್ಪತಿ, ವಿದ್ಯಾರತ್ನಾಕರ , ಪಂಡಿತರತ್ನ, ಸಂಶೋಧನಾ ವಿಚಕ್ಷಣ ಪಂಡಿತಾಚಾರ್ಯ ಇತ್ಯಾದಿ ಬಿರುದು ಪ್ರದಾನ,
ಉಡುಪಿ ಶ್ರೀ ಕೃಷ್ಣ ಮಠದ ಆಸ್ಥಾನ ವಿದ್ವಾನ್,
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 1974,
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ,
ಆಳ್ವಾಸ್ ನುಡಿಸಿರಿ ಪ್ರಶಸ್ತಿ,
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ,
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷತೆ,
ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್
========
👉 ರಾಷ್ಟ್ರೀಯ ಪ್ರಶಸ್ತಿಗಳು :
========
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ,
ಭಾರತ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ–2009.
=========
👉 ಅಂತರರಾಷ್ಟ್ರೀಯ ಮಾನ್ಯತೆ :
==========
1979ರಲ್ಲಿ ಅಮೇರಿಕಾದಲ್ಲಿ ( ಪ್ರಿನ್ಸ್ಟನ್) ನಡೆದ ವಿಶ್ವಶಾಂತಿ ಸಮ್ಮೇಳನಕ್ಕೆ ವಿಶೇಷ ಆಹ್ವಾನಿತರಾಗಿ ಭಾಗಿ
=========
👉 ಸಾಮಾಜಿಕ ಸೇವೆ :
===========
ನೆರೆ ಪ್ರವಾಹಗಳ ಸಂದರ್ಭಗಳಲ್ಲಿ ಸಂತ್ರಸ್ತರ ನೆರವಿಗಾಗಿ ಮಾನವೀಯತೆಯ ನೆಲೆಯಲ್ಲಿ ರಾಜ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಲಕ್ಷಕ್ಕೂ ಹೆಚ್ಚು ಆರ್ಥಿಕ ದೇಣಿಗೆ, ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಸಂತ್ರಸ್ತರಾದ ಬಡವರಿಗೆ ಆಹಾರ ಸಾಮಗ್ರಿ ವಿತರಣೆ.
=========
No comments:
Post a Comment